Tuesday, October 4, 2022
Home ತಾಜಾ ಸುದ್ದಿಗಳು ಪ್ರತಿ ಬಣ್ಣದಲ್ಲೂ ಇದೆ ಹರುಷ: ಹೋಳಿ ಹಬ್ಬಕ್ಕೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಪ್ರತಿ ಬಣ್ಣದಲ್ಲೂ ಇದೆ ಹರುಷ: ಹೋಳಿ ಹಬ್ಬಕ್ಕೆ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕೋವಿಡ್ ಇಳಿಮುಖವಾದ ನಂತರ ಇಡೀ ದೇಶವು ಸಂಭ್ರಮದಿಂದ ಹೋಳಿಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್‍ಸಿಂಗ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಹುಲ್‍ ಗಾಂಧಿ ಸೇರಿದಂತೆ ಪ್ರಮುಖರು ಹಬ್ಬಕ್ಕೆ ಶುಭ ಕೋರಿದ್ದಾರೆ.

ನಿಮ್ಮೆಲ್ಲರಿಗೂ ಪರಸ್ಪರ ಪ್ರೀತಿ ವಾತ್ಸಲ್ಯ ಹಾಗೂ ಸಹೋದರತ್ವ ಸಂಕೇತವಾಗಿರುವ ಹೋಳಿಹಬ್ಬದ ಶುಭಾಶಯಗಳು. ಈ ಬಣ್ಣದ ಹಬ್ಬದಲ್ಲಿ ಪ್ರತಿಯೊಂದು ಬಣ್ಣವೂ ನಿಮ್ಮ ಜೀವನದಲ್ಲಿ ಸಂತೋಷ, ಹರುಷ ತರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇದು ಸಕಾರಾತ್ಮಕತೆ, ಚೈತನ್ಯ, ಸಂತೋಷ ಹಾಗೂ ಸಾಮರಸ್ಯಕ್ಕೆ ಸಂಬಂಧಿಸಿದ ಬಣ್ಣಗಳ ಹಬ್ಬವಾಗಿದೆ. ಎಲ್ಲರಿಗೂ ಹಬ್ಬದ ಶುಭಾಶಯಗಳು ಎಂದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್‍ ಗಾಂಧಿ ಸಹ ಹೋಳಿ ಹಬ್ಬದ ಸಂದೇಶ ಕೋರಿದ್ದು, ಹೃದಯಗಳನ್ನು ಬೆಸೆಯುವ ಈ ಹೋಳಿಹಬ್ಬ ಪ್ರತಿಯೊಬ್ಬರಿಗೂ ಹರುಷ ತರಲಿ. ಕೋವಿಡ್ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಿರುವುದು ಹರ್ಷದಾಯಕ. ಆದಾಗ್ಯೂ ಹಲವಾರು ದೇಶಗಳಲ್ಲಿ ಮತ್ತೆ ಅಲೆ ಮುಂದುವರಿಯುತ್ತಿದ್ದು ಎಚ್ಚರಿಕೆಯಿಂದಿರುವಂತೆ ಜನರಿಗೆ ಸೂಚಿಸಲಾಗುತ್ತಿದೆ ಎಂದು ಸಲಹೆ ನೀಡಿದ್ದಾರೆ. 

ಆಸ್ಟ್ರೇಲಿಯಾ ಪ್ರಧಾನಿಯ ಶುಭಸಂದೇಶ:
ಹೋಳಿಹಬ್ಬದ ಪ್ರಯುಕ್ತ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಭಾರತೀಯರಿಗೆ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಅವರು ಶುಭ ಹಾರೈಸಿದ್ದಾರೆ. ಈ ಕುರಿತು ಅಧೀಕೃತ ಪ್ರಕಟಣೆ ಹೊರಡಿಸಿರುವ ಅವರು, ನಾನು ಭಾರತೀಯ ಆಸ್ಟ್ರೇಲಿಯನ್ ಸಮುದಾಯಕ್ಕೆ ಧನ್ಯವಾದ ಹೇಳಲು ಬಯಸುತ್ತೇನೆ. ನಿಮ್ಮ ಸ್ವಂತ ಕುಟುಂಬಗಳಿಗೆ ಮಾತ್ರವಲ್ಲದೆ ಎಲ್ಲ ಆಸ್ಟ್ರೇಲಿಯನ್ನರಿಗೂ ನೀವು ಪ್ರೀತಿ ಮತ್ತು ಕಾಳಜಿಯನ್ನು ತೋರಿಸಿದ್ದೀರಿ. ಅಲ್ಲದೆ, ಕೋವಿಡ್ ಕಾರಣದಿಂದ ಅಂತರ ಮೂಡಿದ್ದ ಸಮುದಾಯಗಳ ನಡುವೆ ಇಂತಹ ಆಚರಣೆಗಳು ಸ್ನೇಹ ಹಾಗೂ ಏಕತೆಯ ಉತ್ಸಾಹದಲ್ಲಿ ನಮ್ಮನ್ನು ಒಟ್ಟಿಗೇ ಸೇರಿಸುತ್ತವೆ, ಭವಿಷ್ಯದ ಭರವಸೆಗಳನ್ನೂ ಪ್ರೇರೇಪಿಸುತ್ತದೆ ಎಂದು ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ನಲ್ಲಿ ಹೊಸ ಇತಿಹಾಸ ಬರೆದ ಜೇಮ್ಸ್​: ಮೊದಲ ದಿನವೇ ದಾಖಲೆ ಗಳಿಕೆ​

- Advertisment -

Most Popular

Quando cinema itau power shopping tabela de preços a concorrência é boa

Como Acelerar Vídeos: 7 Apps, Extensão Grátis no Chrome ou Só com o Celular – Você escolhe! O Tinder está obviamente ciente desse problema, e...

Free Spin Casino Can Be Fun For Everyone

Free Spin Casino - An Overview's complimentary rotates are for Abundant Prize. It is redeemable 5x per day on ports and specialized video games....

Онлайн-казино MostBet – Топ казино интернет, слоты казино демо

СодержаниеКоллекция игровых автоматов от MostBetКак играть на деньги в MostBet казиноОфициальный сайт MostBet, вход и регистрацияЛицензионное казино MostBetMostBet казино бонусы онлайн MostBet предлагает мгновенную игру и...

Pin Up Canlı Casıno gırış — Yeni çıkan casino sitesii

Casino IçeriğiPin Up Giriş Güvenilir Bahis SitesiPin Up Twitter Kayıt OlPin Up’dan harika bir turnuva Şans YarışıPin Up Mobil Giriş SayfasıPin Up Güncel Giriş...

Recent Comments